‘666 ಆಪರೇಷನ್ ಡ್ರೀಮ್ ಥಿಯೇಟರ್’ – ಬಿರುಸಿನ ಶೂಟಿಂಗ್, ಅದ್ಧೂರಿ ಸೆಟ್‌ನಲ್ಲಿ ಶಿವಣ್ಣ-ಧನಂಜಯ್ ಮ್ಯಾಜಿಕ್


ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಶೂಟಿಂಗ್ ಈಗ ಜೋರಾಗಿ ಸಾಗುತ್ತಿದೆ. ‘ಹ್ಯಾಟ್ರಿಕ್ ಹೀರೋ’ ಡಾ. ಶಿವರಾಜ್‌ಕುಮಾರ್ ಹಾಗೂ ‘ಡಾಲಿ’ ಧನಂಜಯ್ ಕಾಂಬಿನೇಷನ್‌ನ ಈ ಸಿನಿಮಾ ಆರಂಭದಿಂದಲೇ ಸಿನಿಪ್ರಿಯರಲ್ಲಿ ಭಾರೀ ಕುತೂಹಲ ಹುಟ್ಟಿಸಿದೆ.
ರೆಟ್ರೋ ಶೈಲಿಯಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದಲ್ಲಿ ಶಿವಣ್ಣ ಮತ್ತು ಡಾಲಿ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇಬ್ಬರ ಕಾಂಬಿನೇಷನ್ ಸೀನ್‌ಗಳನ್ನು ಸೆರೆಹಿಡಿದ ಮೊದಲ ಹಂತದ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದೆ. ಚಿತ್ರತಂಡವು ಬೆಂಗಳೂರು ಕಂಠೀರವ ಸ್ಟುಡಿಯೋದಲ್ಲಿ ಅದ್ದೂರಿ ಸೆಟ್ ನಿರ್ಮಿಸಿ, ಬರೋಬ್ಬರಿ 100 ದಿನಗಳ ಕಾಲ ಶೂಟಿಂಗ್ ನಡೆಸಲು ಸಜ್ಜಾಗಿದೆ. ಇಡೀ ಸಿನಿಮಾದ ಹೆಚ್ಚಿನ ಭಾಗ ಇದೇ ಸೆಟ್‌ನಲ್ಲೇ ನಡೆಯಲಿದೆ ಎಂಬುದು ವಿಶೇಷ.
‘ಗೋಡುಗ’ ಮತ್ತು ‘ಕವಲುದಾರಿ’ ಸಿನಿಮಾಗಳ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ನಿರ್ದೇಶಕ ಹೇಮಂತ್ ಎಂ. ರಾವ್, ಈ ಬಾರಿ ಇನ್ನೂ ದೊಡ್ಡ ಮಟ್ಟದಲ್ಲಿ ಪ್ರಯೋಗ ಮಾಡುತ್ತಿದ್ದಾರೆ. “ಇಂದಿನ ಪೀಳಿಗೆಯನ್ನು ಬೆರಗುಗೊಳಿಸುವುದರ ಜೊತೆಗೆ ಹಿಂದಿನ ಪೀಳಿಗೆಯನ್ನು ನೆನಪಿನ ಹಾದಿಯಲ್ಲಿ ಕರೆದೊಯ್ಯುವ ಜಗತ್ತನ್ನು ಸೃಷ್ಟಿಸುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.
ಸೆಪ್ಟೆಂಬರ್ ತಿಂಗಳಲ್ಲೇ ಎರಡನೇ ಹಂತದ ಶೂಟಿಂಗ್ ಪ್ರಾರಂಭವಾಗಲಿದ್ದು, ಇನ್ನಷ್ಟು ಅದ್ಭುತ ದೃಶ್ಯಗಳನ್ನು ಸೆರೆ ಹಿಡಿಯಲು ತಂಡ ಸಜ್ಜಾಗಿದೆ. ನಿರ್ಮಾಪಕ ಡಾ. ವೈಶಾಕ್ ಜೆ ಗೌಡ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಭರ್ಜರಿ ತಾಂತ್ರಿಕ ಹೂಡಿಕೆಯಲ್ಲಿ ಮೂಡಿ ಬರುತ್ತಿದೆ. “ದೊಡ್ಡ ಪರದೆಯ ಮೇಲೆ ಪ್ರೇಕ್ಷಕರು ಬೆರಗಾಗುವ ಅನುಭವ ನೀಡಲು ಸಿದ್ಧವಾಗಿದ್ದೇವೆ” ಎಂದು ಚಿತ್ರತಂಡ ಹೇಳಿದೆ.
‘666 ಆಪರೇಷನ್ ಡ್ರೀಮ್ ಥಿಯೇಟರ್’ ಶೂಟಿಂಗ್ ಮೇಕಿಂಗ್ ಫೋಟೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳ ನಿರೀಕ್ಷೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
Related posts
Recent posts
Trending News
ಹೆಚ್ಚು ನೋಡಿ‘666 ಆಪರೇಷನ್ ಡ್ರೀಮ್ ಥಿಯೇಟರ್’ – ಬಿರುಸಿನ ಶೂಟಿಂಗ್, ಅದ್ಧೂರಿ ಸೆಟ್‌ನಲ್ಲಿ ಶಿವಣ್ಣ-ಧನಂಜಯ್ ಮ್ಯಾಜಿಕ್
